ರೈತಮಿತ್ರರೇ, ರಿಲಯನ್ಸ್ ಫೌಂಡೇಶನ್ ಮೂಲಕ ನೀಡುತ್ತಿರುವ ಧ್ವನಿ ಸಂದೇಶ. ಶೇಂಗಾ ಬೆಳೆಯಲ್ಲಿ ಕತ್ತು ಕೊಳೆರೋಗ ಮತ್ತು ಬೇರು ಹಾಗೂ ಕಾಯಿ ಕೊಳೆ ರೋಗಗಳ ನಿಯಂತ್ರಣಕ್ಕೆ ಪ್ರತೀ ಕಿ.ಗ್ರಾಂ ಬೀಜಕ್ಕೆ 3 ಗ್ರಾಂ ಕಾರ್ಬಾಕ್ಸಿನ್ 75 ಡಬ್ಲ್ಯೂ.ಪಿ ಅಥವಾ 1 ಗ್ರಾಂ ಟೆಬ್ಯುಕೋನಾಜೊಲ್ 2% ಡಿ.ಎಸ್ ನಿಂದ ಬೀಜೋಪಚಾರ ಮಾಡಿ ಬಿತ್ತಬೇಕು. ರೋಗವು ಹೆಚ್ಚು ಕಂಡುಬಂದ ಹೊಲವನ್ನು ಸಜ್ಜೆ, ಜೋಳ ಅಥವಾ ಮೆಕ್ಕೆಜೋಳದಿಂದ ಪರಿವರ್ತನೆಗೆ ಒಳಪಡಿಸಬೇಕು. ಮಾಗಿ ಉಳುಮೆಯನ್ನು ಹೆಚ್ಚು ಆಳವಾಗಿ ಮಾಡಿ ಭೂಮಿಗೆ ಹೆಚ್ಚು ಹಸಿರೆಲೆ ಗೊಬ್ಬರ, ಕಾಂಪೋಸ್ಟ್ ಅಥವಾ ಎರೆಹುಳು ಗೊಬ್ಬರ ಹಾಕಬೇಕು. ಶೇಂಗಾ ಅಥವಾ ಔಡಲ ಅಥವಾ ಬೇವಿನ ಹಿಂಡಿಯನ್ನು ಪ್ರತೀ ಎಕರೆಗೆ 200 ಕಿ. ಗ್ರಾಂ ಮಣ್ಣಿನಲ್ಲಿ ಬೆರೆಸುವುದು ಉತ್ತಮ. ಈ ಮಾಹಿತಿಯ ಮೂಲವು ಕೃಷಿ ವಿಜ್ಞಾನ ಕೇಂದ್ರ, ಬಾಗಲಕೋಟೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ಸಹಾಯವಾಣಿ 18004198800.
| Comment | Author | Date |
|---|---|---|
| Be the first to post a comment... | ||