ಶೇಂಗಾ ಬೆಳೆಯಲ್ಲಿ ಶಿಲೀಂಧ್ರದ ಕತ್ತು ಕೊಳೆ ರೋಗದ ನಿವಾರಣೆ

ಶೇಂಗಾ ಬೆಳೆಯ ಯಾವುದೇ ಹಂತದಲ್ಲಿ ರೋಗ ಉಂಟಾಗಬಹುದು.ನೆಲದ ಸಮಾನಾಂತರದ ಕಾಂಡಕ್ಕೆ ಬಿಳಿ ಬಣ್ಣದ ಶಿಲೀಂಧ್ರದ ಸೋಂಕು ಕಂಡು ಬರುವುದು. ರೋಗ ಪೀಡಿತ ಗಿಡ ಮೊದಲು ಗಿಡ್ಡ ದಾಗಿದ್ದುಹಳದಿಬಣ್ಣಕ್ಕೆ ತಿರುಗುತ್ತದೆ. ನಂತರ ಪೂರ್ತಿ ಗಿಡ ಒಣಗಿ ಸಾಯುವುದು. ಅಂತಹ ಗಿಡಗಳನ್ನು ಪರೀಕ್ಷಿಸಿದಾಗ ಬಿಳಿ ಬೂಷ್ಟು ಕಾಂಡದ ಮೇಲೆ ಬೆಳೆದಿದ್ದು ಕಂಡು ಬರುವುದು ಹಾಗೂ ಸಾಸಿವೆ ಕಾಳಿನ ಗಾತ್ರ ಹಾಗೂ ಬಣ್ಣಹೊಂದಿದ ಶಿಲೀಂದ್ರದ ಬೀಜಗಳು ಕಂಡು ಬರುವವು. ರೋಗ ಲಕ್ಷಣಗಳು ಕಾಯಿ ಹಾಗೂ ಕಾಯಿದೇಟಿಗೂ ಹರಡುವುದು. ಗಿಡಗಳನ್ನು ಕೀಳುವ ವೇಳೆ ಕಾಯಿಗಳು ಭೂಮಿಯಲ್ಲಿ ಉಳಿಯುವುವು. ಗ್ರಾಂ ಕ್ಯಾಪ್ಟನ್ 80 ಡಬ್ಲು ಪಿ ಅಥವಾ ಥೈರಾಮ್  75 ಡಬ್ಲು ಪಿ ಅಥವಾ ಟ್ರೈಕೊಡೆರ್ಮ  10 ಗ್ರಾಂ ಬಳಸಿ ಬಿಜೋಪಚಾರ ಮಾಡಬೇಕು ಅಥವಾ ಪ್ರತಿ ಕಿ. ಗ್ರಾಂ ಬೀಜಕ್ಕೆ ಗ್ರಾಂ. ಕಾರ್ಬಾಕ್ಸಿನ್ 75 ಡಬ್ಲೂ.ಪಿಅಥವಾ 3.0 ಗ್ರಾಂ (ಕಾರ್ಬನಡೈಜಿಮ್+ ಮ್ಯಾಂಕೋಜೆಬ್) ಅಥವಾ ಗ್ರಾಂ ಟೆಬ್ಯೂಕೊನಜೋಲ್ 2% ಡಿಎಸ್ ನಿಂದ ಬೀಜೋಪಚಾರ ಮಾಡಿ ಬಿತ್ತಬೇಕು. ರೋಗವು ಹೆಚ್ಚು ಕಂಡುಬಂದ ಹೊಲವನ್ನು ಸಜ್ಜೆಜೋಳ ಅಥವಾ ಮೆಕ್ಕೆಜೋಳದಿಂದ ಪರಿವರ್ತನೆಗೆ ಒಳಪಡಿಸಬೇಕು. ಮಾಗಿ ಉಳುಮೆಯನ್ನು ಹೆಚ್ಚು ಆಳವಾಗಿ ಮಾಡಿಮಣ್ಣಿಗೆ ಹೆಚ್ಚು ಹಸಿರೆಲೆ ಗೊಬ್ಬರಕಾಂಪೋಸ್ಟ್ ಅಥವಾ ಎರೆಹುಳು ಗೊಬ್ಬರ ಹಾಕಬೇಕು. ಎಕರೆಗೆ 200 ಕಿಲೋ ಗ್ರಾಂ ರಷ್ಟು ಶೇಂಗಾ ಅಥವಾ ಬೇವಿನ ಹಿಂಡಿಯನ್ನು ಮಣ್ಣಿನಲ್ಲಿ ಬೇರೆಸುವುದು ಉತ್ತಮ.

Content Files
Content Comments
Likes Dislikes
Comment Author Date
Be the first to post a comment...
Content Tags
Get In Touch

Reliance Corporate Park 5 TTC Industrial Area,

Thane-Belapur Road, Ghansoli,

Navi Mumbai - 400701, Maharashtra

Follow Us

Kisan Grow

Machli

Copyright © 2026 Reliance Foundation. All Rights Reserved.