ಶೇಂಗಾ ಬೆಳೆಯಲ್ಲಿ ಎಲೆ ಚುಕ್ಕಿ ರೋಗದ ನಿರ್ವಹಣೆ
ಶೇಂಗಾ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ಲಕ್ಷಣಗಳು. ಕಂದು ಬಣ್ಣದ ವೃತ್ತಾಕಾರದ ಚುಕ್ಕೆಗಳು ಬೆಳೆಯ ಕೆಳಭಾಗದ ಎಲೆಗಳ ಮೇಲೆ ಮೊದಲು ಕಾಣಿಸಿಕೊಂಡು ನಂತರ 2–3 ಮಿ.ಮೀ. ಗಾತ್ರದ ಕಪ್ಪುಚುಕ್ಕಿಗಳಾಗಿ ಕಾಣಿಸಿಕೊಳ್ಳುವುವು ರೋಗ ಲಕ್ಷಣಗಳು. ಎಲೆ ಹಾಗೂ ಕಾಂಡ ಭಾಗದ ಮೇಲೆ ಸಹ ಕಂಡುಬರುತ್ತವೆ. ತೀವ್ರವಾಗಿ ರೋಗ ಹರಡಿದಾಗ ಎಲೆಗಳು ಹಾಗೂ ದೇಟು ಉದುರಿ ಬೀಳುವವು. ಇದರ ನಿರ್ವಹಣೆಗಾಗಿ ಪ್ರತಿ ಲೀಟರ್ ನೀರಿಗೆ 0.5 ಗ್ರಾಂ ಕಾರ್ಬನ್‌ಡೈಜಿಮ್ 50 ಡಬ್ಲೂ.ಪಿ. ಅಥವಾ 2 ಗ್ರಾಂ ಕ್ಲೋರೊಥಲೋನಿಲ್ 75 ಡಬ್ಲೂ.ಪಿ ಅಥವಾ 1 ಮಿ.ಲೀ. ಹೆಕ್ಸಾಕೋನೋಜೋಲ್ 5 ಇ. ಸಿ. ಅಥವಾ 1 ಮಿ.ಲೀ. ಡೈಪೆನ್‌ಕೋನಾಜೋಲ್ 25 ಇ. ಸಿ. ಅಥವಾ 12 ಗ್ರಾಂ ಮೈಕೊಬುಟಾನಿಲ್ 10 ಡಬ್ಲೂಪಿ ಬೆರೆಸಿ ತಯಾರಿಸಿದ ದ್ರಾವಣ ಸಿಂಪರಣೆಯನ್ನು ಬೆಳೆಯ 35 ಹಾಗೂ 50 ನೇ ದಿನದ ಅವಧಿಯಲ್ಲಿ ಮಾಡಬೇಕು. ಅವಶ್ಯಕತೆಯ ಮೇರೆಗೆ ಇದೇ ಸಿಂಪರಣೆಯನ್ನು 15 ದಿವಸಗಳ ಅಂತರದಲ್ಲಿ ಕೈಗೊಳ್ಳಬೇಕು, ಬದಲಾಗಿ ಶೇ. 10 ರ ಅಡಸಾಲಿ ಎಲೆಯ ಕಷಾಯವನ್ನು ಸಿಂಪರಣೆಗೆ ಬಳಸಬಹುದು.
| Comment | Author | Date |
|---|---|---|
| Be the first to post a comment... | ||
Copyright © 2026 Reliance Foundation. All Rights Reserved. Terms & Conditions. Privacy Policy.