ಶೇಂಗಾ ಬೆಳೆಯಲ್ಲಿ ಶಿಲೀಂದ್ರದ ಕೊಳೆ ರೋಗಗಳ ನಿವಾರಣೆ

ರಿಲಯನ್ಸ್ ಫೌಂಡೇಶನ್ ಇವರು ಕೃಷಿ ಸಂಶೋಧನಾ ಕೇಂದ್ರ, ಬೆಳಗಾವಿ ಇವರ ಸಹಯೋಗದೊಂದಿಗೆ ನೀಡುತ್ತಿರುವ ಕೃಷಿ ಸಲಹೆ. ಶೇಂಗಾ ಬೆಳೆಯಲ್ಲಿ ಬೀಜ ಕೊಳೆ, ಸಸಿ ಸೊರಗು, ಶಿಲೀಂದ್ರದ ಕತ್ತು ಕೊಳೆ ಯಂತಹ ರೋಗಗಳ ನಿವಾರಣೆಗಾಗಿ ಪ್ರತಿ ಕಿ.ಗ್ರಾಂ ಬೀಜಕ್ಕೆ 2 ಗ್ರಾಂ ಕ್ಯಾಪ್ಟಾನ್ 80 ಡಬ್ಲೂ.ಪಿ. ಅಥವಾ ಥೈರಾಮ್ 75 ಡಬ್ಲೂ.ಪಿ. ಅಥವಾ ಟ್ರೈಕೋಡರ್ಮಾ 10 ಗ್ರಾಂ ಶಿಲೀಂಧ್ರನಾಶಕದಿಂದ ಬೀಜೋಪಚಾರ ಮಾಡಬೇಕು. ರೋಗವು ಹೆಚ್ಚು ಕಂಡುಬಂದ ಹೊಲವನ್ನು ಸಜ್ಜೆ, ಜೋಳ ಅಥವಾ ಮೆಕ್ಕೆಜೋಳದಿಂದ ಪರಿವರ್ತನೆಗೆ ಒಳಪಡಿಸಬೇಕು. ಮಾಗಿ ಉಳುಮೆಯನ್ನು ಹೆಚ್ಚು ಆಳವಾಗಿ ಮಾಡಿ, ಮಣ್ಣಿಗೆ ಹೆಚ್ಚು ಹಸಿರೆಲೆ ಗೊಬ್ಬರ, ಕಾಂಪೋಸ್ಟ್ ಅಥವಾ ಎರೆಹುಳು ಗೊಬ್ಬರ ಹಾಕಬೇಕು. ಶೇಂಗಾ ಅಥವಾ ಔಡಲ ಅಥವಾ ಬೇವಿನ ಹಿಂಡಿಯನ್ನು (200 ಕಿ. ಗ್ರಾಂ/ಎಕರೆ) ಮಣ್ಣಿನಲ್ಲಿ ಬೆರೆಸುವುದು ಉತ್ತಮ. 

Content Files
Content Comments
Likes Dislikes
Comment Author Date
Be the first to post a comment...
Content Tags
Get In Touch

Reliance Corporate Park 5 TTC Industrial Area,

Thane-Belapur Road, Ghansoli,

Navi Mumbai - 400701, Maharashtra

Follow Us

Kisan Grow

Machli

Copyright © 2026 Reliance Foundation. All Rights Reserved. Terms & Conditions. Privacy Policy.