ರೈತಮಿತ್ರರೇ, ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ವತಿಯಿಂದ ರಿಲಯನ್ಸ್ ಫೌಂಡೇಷನ್ ಇವರು ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಬಗ್ಗೆ ನಿಮಗಾಗಿ ಒದಗಿಸುತ್ತಿರುವ ಸಲಹೆ. ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯ ಆದ್ದರಿಂದ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13, 15:15:15, 10:26:26, 12:32:16, 22:22:11 14:35:14, 17:17:17, 14:28:14, 19:19:19 ಹಾಗೂ 20:10:10 ಇವುಗಳನ್ನು ಬಳಸಲು ಸೂಚಿಸಲಾಗಿದೆ.
| Comment | Author | Date |
|---|---|---|
| Be the first to post a comment... | ||
Copyright © 2026 Reliance Foundation. All Rights Reserved. Terms & Conditions. Privacy Policy.