ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ

ರಿಲಯನ್ಸ್ ಫೌಂಡೇಶನ್ ಹವಾಮಾನ ಮುನ್ಸೂಚನೆ
ಮಾನ್ಯತೆ: 24 ರಿಂದ 29 ಅಕ್ಟೋಬರ್ 2026
ಕರಾವಳಿ ಕರ್ನಾಟಕ: 24ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 25ರಂದು ಮೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 26ರಿಂದ 29ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ಉತ್ತರ ಒಳನಾಡು ಕರ್ನಾಟಕ: 24ರಂದು ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. 25ರಿಂದ 29ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ದಕ್ಷಿಣ ಒಳನಾಡು ಕರ್ನಾಟಕ: 24ರಂದು ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಹಲವು ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆ ಹಾಗೂ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. 25 ಮತ್ತು 26ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಅಥವಾ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 27ರಿಂದ 29ರವರೆಗೆ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಸಂಪರ್ಕಿಸಿ WhatsApp ಚಾಟ್‌ಬಾಟ್ ಸಂಖ್ಯೆ: 8779500400
ಮಾಹಿತಿ ಮೂಲ: ಭಾರತೀಯ ಹವಾಮಾನ ಇಲಾಖೆ
ನಿಮ್ಮ WhatsApp ಗೆ ನೇರವಾಗಿ ನಿಯಮಿತ ಕೃಷಿ ಸಲಹೆಗಳು ಮತ್ತು ಉಪಯುಕ್ತ ಮಾಹಿತಿಯನ್ನು ಪಡೆಯಿರಿ.
Content Files
Content Comments
Likes Dislikes
Comment Author Date
Be the first to post a comment...
Content Tags