ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ

🌱 ರಿಲಯನ್ಸ್ ಫೌಂಡೇಶನ್ ಹವಾಮಾನ ಸಲಹೆ
1. ಕರಾವಳಿ ಕರ್ನಾಟಕ
31 ಅಕ್ಟೋಬರ್ ರಿಂದ 05 ನವೆಂಬರ್ 2026: 31 ಅಕ್ಟೋಬರ್ ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡದಲ್ಲಿ ಒಣ ಹವಾಮಾನವಿರಲಿದೆ. ನವೆಂಬರ್ 1 ಮತ್ತು 2ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 4ರಂದು ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ನವೆಂಬರ್ 5ರಂದು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
2. ಉತ್ತರ ಒಳನಾಡು ಕರ್ನಾಟಕ
31 ಅಕ್ಟೋಬರ್ ರಿಂದ 05 ನವೆಂಬರ್ 2026: ಅಕ್ಟೋಬರ್ 31ರಂದು ರಾಯಚೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1ರಂದು ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ನವೆಂಬರ್ 2 ಮತ್ತು 3ರಂದು ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಬಿರುಗಾಳಿ ಇರಲಿದ್ದು, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 4ರಂದು ಗದಗ ಮತ್ತು ಕೊಪ್ಪಳ ಹಾಗೂ ನವೆಂಬರ್ 5ರಂದು ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
3. ದಕ್ಷಿಣ ಒಳನಾಡು ಕರ್ನಾಟಕ
31 ಅಕ್ಟೋಬರ್ ರಿಂದ 05 ನವೆಂಬರ್ 2026: ಅಕ್ಟೋಬರ್ 31ರಂದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1ರಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ನವೆಂಬರ್ 2ರಂದು ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 3ರಿಂದ 5ರವರೆಗೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇತರ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
Content Files
Content Comments
Likes Dislikes
Comment Author Date
Be the first to post a comment...
Content Tags