ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಹವಾಮಾನ ಮುನ್ಸೂಚನೆ

🌱 ರಿಲಯನ್ಸ್ ಫೌಂಡೇಶನ್ ಹವಾಮಾನ ಸಲಹೆ
ಕರಾವಳಿ ಕರ್ನಾಟಕ: ನವೆಂಬರ್ 08 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವಾಮಾನವಿರಲಿದೆ. ನವೆಂಬರ್ 09 ರಿಂದ 12ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ.
ಉತ್ತರ ಒಳನಾಡು ಕರ್ನಾಟಕ: ನವೆಂಬರ್ 08ರಿಂದ 12ರವರೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ.
ದಕ್ಷಿಣ ಒಳನಾಡು ಕರ್ನಾಟಕ: ನವೆಂಬರ್ 08 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 10 ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನವಿರಲಿದ್ದು, ನವೆಂಬರ್ 11 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ.
ಈ ಮಾಹಿತಿಯ ಮೂಲ ಗ್ರಾಮೀಣ ಕೃಷಿ ಮೌಸಂ ಸೇವೆ, ಭಾರತೀಯ ಹವಾಮಾನ ಇಲಾಖೆ
Content Files
Content Comments
Likes Dislikes
Comment Author Date
Be the first to post a comment...
Content Tags