ಕರ್ನಾಟಕದ ಹವಾಮಾನ ಮುನ್ಸೂಚನೆ

🌱 ರಿಲಯನ್ಸ್ ಫೌಂಡೇಶನ್ ಹವಾಮಾನ ಸಲಹೆ
ಕರಾವಳಿ ಕರ್ನಾಟಕ
11ರಿಂದ 14-ನವೆಂಬರ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. 15 ಮತ್ತು 16-ನವೆಂಬರ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡದಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಉತ್ತರ ಒಳನಾಡು ಕರ್ನಾಟಕ
11ರಿಂದ 16-ನವೆಂಬರ್: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಾದ್ಯಂತ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಕರ್ನಾಟಕ
11ರಿಂದ 14-ನವೆಂಬರ್: ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. 15 ಮತ್ತು 16-ನವೆಂಬರ್: ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ಈ ಮಾಹಿತಿಯ ಮೂಲ ಗ್ರಾಮೀಣ ಕೃಷಿ ಮೌಸಂ ಸೇವೆ, ಭಾರತೀಯ ಹವಾಮಾನ ಇಲಾಖೆ
Content Files
Content Comments
Likes Dislikes
Comment Author Date
Be the first to post a comment...
Content Tags